ಪ್ರೀತಮ್ ಗುಬ್ಬಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಬಾನ ದಾರಿಯಲ್ಲಿ’ ಸಿನಿಮಾ, ಹಾಡುಗಳ ಮೂಲಕವೇ ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇನ್ನೇನು ಬಿಡುಗಡೆಗೆ ಸಜ್ಜಾಗಿದೆ.
ನಾಳೆ ಈ ಚಿತ್ರದ ಟೀಸರನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.
ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ಶ್ರೀ ವಾರೆ ಟಾಕೀಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದ್ದು, ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್ ಹಾಗೂ ರೇಷ್ಮಾ ನಾಣಯ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.