ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಳೆ 29ನೇ ವಸಂತಕ್ಕೆ ಕಾಲಿಡಲಿದ್ದು, ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಯಾಡ್ ಮ್ಯಾನರ್ಸ್ ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.
ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬೆಳಿಗ್ಗೆ 10:35ಕ್ಕೆ ಈ ಬರ್ತಡೇ ಟೀಸರ್ ರಿಲೀಸ್ ಮಾಡುವ ಮೂಲಕ ಅಭಿಷೇಕ್ ಅಂಬರೀಶ್ ಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಲಿದೆ.
ದುನಿಯಾ ಸೂರಿ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರದಲ್ಲಿ ಅಭಿಷೇಕ್ ಅಂಬರೀಶ್ ಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯಿಸಿದ್ದು, ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ಚರಣ್ ರಾಜ್ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟುಡಿಯೋ 18 ಲಾಂಛನದಲ್ಲಿ ಸುಧೀರ್ ಕೆ ಎಂ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.