ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಟನೆಯ ‘ರಾಣ’ ಸಿನಿಮಾ ಈಗಾಗಲೇ ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ.
ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೇಯಸ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಇವರಿಗೆ ಜೋಡಿಯಾಗಿ ಏಕ್ ಲವ್ ಯಾ ಖ್ಯಾತಿಯ ರೇಷ್ಮಾ ನಾಣಯ್ಯ ಅಭಿನಯಿಸಿದ್ದಾರೆ.
ಗುಜ್ಜಲ್ ಟಾಕೀಸ್ ಬ್ಯಾನರ್ ನಡಿ ಗುಜ್ಜಲ್ ಪುರುಷೋತ್ತಮ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ರ್ಯಾಪರ್ ಚಂದನ್ ಶೆಟ್ಟಿ ಟ್ರಾನ್ಸ್ ಸಂಗೀತ ಸಂಯೋಜನೆ ನೀಡಿದ್ದಾರೆ.
ಆ್ಯಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.