ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣದ ಬಳಿಕ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಲಾಗುತ್ತದೆ.
ನಾಳೆ ಅಂದರೆ ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದು, 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಇದಾಗಿದೆ.
ಈ ವರ್ಷ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್ ನಲ್ಲಿ ಅಂತಹ ರಾಜ್ಯಗಳಿಗೆ ಭರಪೂರ ಕೊಡುಗೆ ಸಿಗುವ ಸಾಧ್ಯತೆ ಇದೆ. ಅಲ್ಲದೆ ಮಾಧ್ಯಮ ವರ್ಗಕ್ಕೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.