
ಈಗಾಗಲೇ ತನ್ನ ಟೈಟಲ್ ನಿಂದಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಟಗರು ಪಲ್ಯ ಚಿತ್ರದ ಫಸ್ಟ್ ಲುಕ್ ಅನ್ನು ನಾಳೆ 11:25ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಉಮೇಶ್ ಕೃಪಾ ನಿರ್ದೇಶನದ ಈ ಚಿತ್ರದಲ್ಲಿ ನಾಗಭೂಷಣ್ ನಾಯಕನಾಗಿ ಅಭಿನಯಿಸಿದ್ದು, ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತ ನಾಯಕಿಯಾಗಿ ನಟಿಸಿದ್ದಾರೆ ಇದು ಅವರ ಚೊಚ್ಚಲ ಸಿನಿಮಾವಾಗಿದೆ.
ಡಾಲಿ ಧನಂಜಯ್ ತಮ್ಮ ಡಾಲಿ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದು, ರಂಗಾಯಣ ರಘು, ತಾರಾ, ಯಶ ಶಿವಕುಮಾರ್, ಹುಲಿ ಕಾರ್ತಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.
ಈಗಾಗಲೇ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

