alex Certify ನಾಳೆ ‘ವಿಕ್ರಾಂತ್ ರೋಣ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘ವಿಕ್ರಾಂತ್ ರೋಣ’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಅನೂಪ್ ಭಂಡಾರಿ ನಿರ್ದೇಶನದ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ವಿಕ್ರಾಂತ್ ರೋಣ’ ಜುಲೈ 28ರಂದು ತೆರೆಮೇಲೆ ಬರಲಿದ್ದು, ಕಿಚ್ಚನ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈ ಸಿನಿಮಾದ ‘ಹೇ ಫಕೀರಾ’ ಎಂಬ ಲಿರಿಕಲ್ ವಿಡಿಯೋ ನಾಳೆ ಸಂಜೆ 5 ಗಂಟೆಗೆ ಲಹರಿ ಮ್ಯೂಸಿಕ್ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ವಿಕ್ರಾಂತ್ ರೋಣ ಚಿತ್ರತಂಡ ತನ್ನ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ. ಈಗಾಗಲೇ ಈ ಚಿತ್ರದ ‘ರಾರಾ ರುಕ್ಕಮ್ಮ’ ಹಾಡು  ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ.

ಈ ಸಿನಿಮಾದಲ್ಲಿ ಕಿಚ್ಚ ಸುದೀಪ್ ಸೇರಿದಂತೆ ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಜಾಕ್ವೆಲಿನ್ ಫರ್ನಾಂಡಿಸ್, ಮಧುಸೂದನ್ ರಾವ್, ವಾಸುಕಿ ವೈಭವ್, ಯೋಗೀಶ್ ಶೆಟ್ಟಿ ಸೇರಿದಂತೆ ಹಲವರ ತಾರಾಬಳಗವಿದ್ದು, ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲೂ ತೆರೆಕಾಣಲಿದೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...