ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನಡೆಯುತ್ತಿದ್ದು, ಇದರಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ಈ ಮೇಳವನ್ನು ಆಯೋಜಿಸಲಾಗಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮೋ ಸೇರಿದಂತೆ ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.
ಆಸಕ್ತರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಾಗರ ರಸ್ತೆ, ಪಂಪಾ ನಗರ ಎರಡನೇ ಕ್ರಾಸ್ ನ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಜರಾಗುವಂತೆ ಕೋರಲಾಗಿದೆ.