ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ಶುಗರ್ ಫ್ಯಾಕ್ಟರಿ ಚಿತ್ರದ ಟೈಟಲ್ ಟ್ರ್ಯಾಕ್ ನಾಳೆ ಸಂಜೆ 6 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ರ್ಯಾಪರ್ ಚಂದನ್ ಶೆಟ್ಟಿ ಹಾಗೂ ರುಚೆರಾ ಈ ಹಾಡಿಗೆ ಧ್ವನಿಯಾಗಿದ್ದು ಕಬೀರ್ ರಫಿ ಸಂಗೀತ ಸಂಯೋಜನೆ ನೀಡಿದ್ದಾರೆ.
ರೊಮ್ಯಾಂಟಿಕ್ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ಸೋನಾಲ್ ಮೊಂಥೈರೋ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಆರ್. ಗಿರೀಶ್ ನಿರ್ಮಾಣ ಮಾಡಿದ್ದಾರೆ.