
ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಸಲಗ’ ಸಿನಿಮಾ ನಾಳೆ ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ದುನಿಯಾ ವಿಜಯ್ ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. ವೀನಸ್ ಎಂಟರ್ ಟೇನರ್ ಬ್ಯಾನರ್ ನಡಿ ಕೆ ಪಿ ಶ್ರೀಕಾಂತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
BIG NEWS: ಕೊತ್ವಾಲ್ ರಾಮಚಂದ್ರನ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕಚೇರಿಯಲ್ಲೇ ಬಯಲು; ಸಿದ್ದರಾಮಯ್ಯ ಶಿಷ್ಯ ಪಡೆಯಿಂದ ಡಿ.ಕೆ.ಶಿಗೆ ಖೆಡ್ಡಾ; ಟಾಂಗ್ ನೀಡಿದ ಸಿ.ಟಿ.ರವಿ
ಈ ಚಿತ್ರದಲ್ಲಿ ದುನಿಯಾ ವಿಜಯ್ ಗೆ ಜೋಡಿಯಾಗಿ ಸಂಜನಾ ಆನಂದ್ ಅಭಿನಯಿಸಿದ್ದಾರೆ, ಡಾಲಿ ಧನಂಜಯ್ ಸೇರಿದಂತೆ ನಾಗಭೂಷಣ್, ಬಿ ವಿ ಭಾಸ್ಕರ್, ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ.
