alex Certify ನಾವು ಕೊಡುತ್ತೇವೆ ಮಾಧ್ಯಮಗಳ ಮೇಲಿನ ನೈಜ ದಾಳಿ ಪಟ್ಟಿ ಎಂದ ಸಿಎಂ ಸಿದ್ದರಾಮಯ್ಯ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾವು ಕೊಡುತ್ತೇವೆ ಮಾಧ್ಯಮಗಳ ಮೇಲಿನ ನೈಜ ದಾಳಿ ಪಟ್ಟಿ ಎಂದ ಸಿಎಂ ಸಿದ್ದರಾಮಯ್ಯ….!

ಪ್ರತಿಪಕ್ಷಗಳ ಒಕ್ಕೂಟ I.N.D.I.A., ಮಾಧ್ಯಮ ಕ್ಷೇತ್ರದಲ್ಲಿನ 12 ಮಂದಿಯ ಪಟ್ಟಿ ಬಿಡುಗಡೆ ಮಾಡಿದ್ದು, ಅವರುಗಳು ನಡೆಸುವ ಚರ್ಚೆಗಳು ಏಕ ಪಕ್ಷೀಯವಾಗಿರುವ ಕಾರಣ ಇದರಲ್ಲಿ ಭಾಗವಹಿಸಲು ನಮ್ಮ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಹೇಳಿವೆ.

‘ಇಂಡಿಯಾ’ ಒಕ್ಕೂಟದ ನಡೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಟಾಂಗ್ ನೀಡಿದ್ದಾರೆ.

ಮಾನ್ಯ J.P.Nadda ಅವರೇ,
ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ.

ಸತ್ಯದ ವರದಿ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾದ ಪತ್ರಕರ್ತರು:

• ಸಿದ್ದಿಕ್‌ ಕಪ್ಪನ್‌
• ಮೊಹಮ್ಮದ್‌ ಝುಬೇರ್
• ಅಜಿತ್‌ ಓಝಾ
• ಜಸ್ಪಾಲ್‌ ಸಿಂಘ್‌
• ಸಜದ್‌ ಗುಲ್‌

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಮೋದಿ ಆಡಳಿತದಲ್ಲಿ ಕೊಲೆಯಾದ ಪತ್ರಕರ್ತರು:

• ರಾಕೇಶ್‌ ಸಿಂಗ್‌ ಉತ್ತರ ಪ್ರದೇಶ, ಸರ್ಕಾರಿ ನಿಧಿ ಅವ್ಯವಹಾರ ಕುರಿತು ವರದಿ
• ಶುಭಂ ಮಣಿ ತ್ರಿಪಾಠಿ, ಉತ್ತರ ಪ್ರದೇಶ, ಮರಳು ದಂಧೆ ಕುರಿತು ವರದಿ
• ಜಿ ಮೋಸೆಸ್‌, ತಮಿಳುನಾಡು, ಗೋಮಾಳ ಅಕ್ರಮ ಮಾರಾಟ ಕುರಿತು ವರದಿ
• ಪರಾಗ್‌ ಭುಯಾನ್, ಅಸ್ಸಾಮ್‌, ಎಸ್‌ಐನೇಮಕಾತಿ ಹಗರಣ ಕುರಿತು ವರದಿ
• ಗೌರಿ ಲಂಕೇಶ್‌, ಕೋಮುವಾದ ವಿರೋಧಿಸಿದ್ದಕ್ಕೆ

ಪತ್ರಿಕಾ ಸ್ವಾತಂತ್ಯ್ರ: ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನ..!!
2015 – 136ನೇ ಸ್ಥಾನ
2019 – 140ನೇ ಸ್ಥಾನ
2022 – 150ನೇ ಸ್ಥಾನ
2023 – 161ನೇ ಸ್ಥಾನ

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ.
ಪ್ರಧಾನಿ Narendra Modi ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ…!! ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...