ಬೆಂಗಳೂರು: ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬೆಳಗಾವಿಯಲ್ಲಿ ನಾವು ಸರಿಯಾದ ಅಭ್ಯರ್ಥಿಯನ್ನೇ ಹಾಕಿಲ್ಲ. ಆದರೂ ನಮಗೆ ಒಳ್ಳೆಯ ನಂಬರ್ ಬಂದಿರುವುದು ಸಮಾಧಾನಕರ ಸಂಗತಿ ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಸ್ಥಳೀಯ ಚುನಾವಣೆಗಳಲ್ಲಿ ಸ್ಥಳೀಯ ವಿಚಾರಗಳು ಮಹತ್ವದ್ದಾಗಿರುತ್ತದೆ. ಮತದಾರರ ತೀರ್ಪಿಗೆ ತಲೆಬಾಗುತ್ತೇವೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿರಬಹುದು ಆದರೆ ಸಾಧನೆ ಸಮಾಧಾನ ತಂದಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗಳತ್ತ ಗಮನ ಹರಿಸುತ್ತೇವೆ ಎಂದರು.
‘ ಆ ರಾತ್ರಿ ಧೋನಿ ಟೀಂ ಇಂಡಿಯಾ ಜೆರ್ಸಿಯಲ್ಲೇ ಮಲಗಿದ್ದರು, ಕಣ್ಣಂಚಲ್ಲಿ ನೀರಿತ್ತು ’ – ಭಾವುಕ ಕ್ಷಣಗಳನ್ನು ನೆನಪಿಸಿಕೊಂಡಿದ್ದ ಆರ್. ಅಶ್ವಿನ್
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಮಾತನಾಡಿದ ಅವರು, 15 ವರ್ಷಗಳಿಂದ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಅಧಿಕಾರ ಇಲ್ಲ. ಆದರೆ ಈ ಬಾರಿ ಒಳ್ಳೆ ಫಲಿತಾಂಶ ಬಂದಿದೆ. ಹಲವೆಡೆಗಳಲ್ಲಿ ಬಂಡಾಯ ಅಭ್ಯರ್ಥಿಗಳು ಗೆದ್ದಿದ್ದಾರೆ. ಗಾಬರಿಯಾಗುವಂತದ್ದೇನಿಲ್ಲ. ಉತ್ತಮ ಸಂಖ್ಯೆಗಳು ಬಂದಿವೆ ಎಂದು ಹೇಳಿದರು.
ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ನಮಗೆ ಪ್ರಚಾರ ಮಾಡಲು ಅವಕಾಶ ನೀಡಿಲ್ಲ. ಬಿಜೆಪಿ ನಾಯಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಗೆದ್ದಿದ್ದಾರೆ. ನಾವು ಎಷ್ಟು ಅಗತ್ಯ ಅಷ್ಟು ಪ್ರಚಾರ ಮಾಡಿದ್ದೇವೆ. ಆ ನಿಟ್ಟಿನಲ್ಲಿ ಒಳ್ಳೆಯ ನಂಬರ್ ಗಳು ಸಿಕ್ಕಿವೆ ಎಂದು ಹೇಳಿದ್ದಾರೆ.