ಮೋಝಿಪುರ( ಭಾಷೆಗಾಗಿ ಸಮರ) ಹುತಾತ್ಮರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ 1967ರಲ್ಲಿ ಅಣ್ಣಾ( ಸಿಎನ್ ಅಣ್ಣಾದೊರೈ) ಅಧಿಕಾರಕ್ಕೆ ಬಂದ ಸಮಯದಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತಂದು ರಾಜ್ಯಕ್ಕೆ ತಮಿಳುನಾಡು ಎಂದು ಹೆಸರಿಟ್ಟಿದ್ದರು ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯ ಭಾಷೆಗಳನ್ನು ರಾಷ್ಟ್ರದ ಅಧಿಕೃತ ಭಾಷೆಗಳನ್ನಾಗಿ ಮಾಡುವ ಕಾನೂನುಗಳನ್ನು ತಿದ್ದುಪಡಿ ಮಾಡಲು ನಾವಿಂದಿಗೂ ಹೆಣಗಾಡುತ್ತಿದ್ದೇವೆ ಎಂದು ಸಿಎಂ ಎಂಕೆ ಸ್ಟಾಲಿನ್ ಹೇಳಿದರು.
ನಾವು ತಮಿಳು ಎಂದು ಹೇಳಿದ ಮಾತ್ರಕ್ಕೆ ನಾವೆಲ್ಲ ಸಂಕುಚಿತ ಮನಸ್ಸಿನವರು ಎಂದರ್ಥವಲ್ಲ. ಹಿಂದಿ ಮಾತ್ರವಲ್ಲ, ನಾವು ಯಾವುದೇ ಭಾಷೆಯನ್ನು ವಿರೋಧಿಸುವವರಲ್ಲ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.
ನಾವು ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ಹೇರಿಕೆಯನ್ನು ಖಂಡಿತವಾಗಿಯೂ ವಿರೋಧಿಸುತ್ತೇವೆ. ನಾವು ತಮಿಳನ್ನು ಪ್ರೀತಿಸುತ್ತೇವೆ ಎಂದ ಮಾತ್ರಕ್ಕೆ ನಾವು ಬೇರೆ ಭಾಷೆಗಳನ್ನು ದ್ವೇಷಿಸುತ್ತೇವೆ ಎಂದು ಅರ್ಥವಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.