ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದ್ದು, ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಸಮರ್ಥಿಸಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಒಂದು ಹೆಜ್ಜೆ ಮುಂದೆ ಹೋಗಿ ರಾಜ್ಯದಲ್ಲಿ ಉರ್ದು ಶಾಲೆಗಳನ್ನೇ ಮುಚ್ಚಬೇಕು ಎಂದು ಹೇಳಿದ್ದಾರೆ. ಇನ್ನು ಮಾಜಿ ಸಚಿವ ಸೊಗಡು ಶಿವಣ್ಣ ಸಹ ಕಾಂಗ್ರೆಸ್ ನಾಯಕರ ವಿರುದ್ದ ಕಿಡಿ ಕಾರಿದ್ದಾರೆ.
ನಾವೇನು ಅಫ್ಘಾನಿಸ್ತಾನದಲ್ಲಿದ್ದೇವಾ ಎಂದು ಪ್ರಶ್ನಿಸಿರುವ ಸೊಗಡು ಶಿವಣ್ಣ, ಹಿಜಾಬ್ ಪರ ವಾದಿಸುತ್ತಿರುವವರ ವಿರುದ್ದ ದೇಶದ್ರೋಹದ ಕೇಸ್ ದಾಖಲಿಸಿ ಎಂದು ಒತ್ತಾಯಿಸಿದ್ದಾರೆ.