ರಾಜ್ಯದ ವಿಚಾರದಲ್ಲಿ ಯಾವ ಸಂದರ್ಭದಲ್ಲಿ ಎಂತಹ ನಿರ್ಧಾರ ಕೈಗೊಳ್ಳಬೇಕು ಎಂಬುದು ನನಗೆ ತಿಳಿದಿದೆ. ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಟಾಂಗ್ ನೀಡಿದ್ದಾರೆ. ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಬಹ್ಮಕಲಶೋತ್ಸವ ಪ್ರಯುಕ್ತ ಸಿಎಂ ಆಗಮಿಸಿದ್ದಾರೆ.
ಉಡುಪಿಯ ಹೆಲಿಪ್ಯಾಡ್ನಲ್ಲಿ ಬಂದಿಳಿದ ಬಳಿಕ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸಿಎಂ ಮೌನ ವಹಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ರು. ಹೆಚ್ಚು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಬೇಕು ಎಂಬುದು ನನಗೆ ತಿಳಿದಿದೆ. ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಹೇಳಿದ್ರು.
ನಮ್ಮ ಸರ್ಕಾರವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಯಾರಾದರೂ ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸ ಮಾಡಿದರೆ ಅದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಎಚ್ಚರಿಕೆ ನೀಡಿದರು.