ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.
ತಾಳಗುಪ್ಪದಿಂದ ಬೆಂಗಳೂರಿಗೆ ಮಾರುತಿ ಡಿಸೈರ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಚಾಲಕ ರಾಘು ಅವರ ನಿಯಂತ್ರಣ ತಪ್ಪಿದ ಕಾರು ಆನಂದಪುರಂ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿದೆ.
ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ರಾಘು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಳಿಕ ಜೆಸಿಬಿ ಬಳಸಿ ಕಾರನ್ನು ಮೇಲಕ್ಕೆತ್ತಲಾಗಿದೆ.