alex Certify ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.

ತಾಳಗುಪ್ಪದಿಂದ ಬೆಂಗಳೂರಿಗೆ ಮಾರುತಿ ಡಿಸೈರ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಚಾಲಕ ರಾಘು ಅವರ ನಿಯಂತ್ರಣ ತಪ್ಪಿದ ಕಾರು ಆನಂದಪುರಂ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದಲ್ಲಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿದೆ.

ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ರಾಘು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಳಿಕ ಜೆಸಿಬಿ ಬಳಸಿ ಕಾರನ್ನು ಮೇಲಕ್ಕೆತ್ತಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...