ನಿರ್ಗತಿಕ ಮಕ್ಕಳನ್ನು ಗುರುತಿಸುವಿಕೆ ಹಾಗೂ ಪುನರ್ವಸತಿ ಕಲ್ಪಿಸಲು ವಿಳಂಬ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ.
ಪ್ರತಿ ಜಿಲ್ಲೆಗಳಲ್ಲಿ ರಚಿಸಬೇಕಾದ ವಿಶೇಷ ಬಾಲಾಪರಾಧಿ ಪೊಲೀಸ್ ಘಟಕಗಳನ್ನು ಸರಿಯಾಗಿ ಸ್ಥಾಪನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ನಿರ್ಗತಿಕ ಮಕ್ಕಳನ್ನು ಗುರುತಿಸಲು ಎಸ್ಜೆಪಿಯುಗಳು, ಎನ್ಜಿಓಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳನ್ನು ಬಳಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ನಿರ್ದೇಶನ ನೀಡಿದೆ.
ಈಗಾಗಲೇ ಗುರುತಿಸಲಾದ ಮಕ್ಕಳ ಪುನರ್ವಸತಿಯನ್ನು ತ್ವರಿತಗೊಳಿಸಬೇಕು. ಬೀದಿಗಳಲ್ಲಿ ವಾಸಿಸುವ ಮಕ್ಕಳ ಪುರ್ನವಸತಿ ಕುರಿತು ರಾಜ್ಯ ಸರ್ಕಾರಗಳು ನೀತಿ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಬೀದಿಗಳಲ್ಲಿ ವಾಸ ಮಾಡುವ ಮಕ್ಕಳ ಪುನರ್ವಸತಿ ಕುರಿತಂತೆ ಎಲ್ಲಾ ರಾಜ್ಯಗಳ ಜೊತೆಯಲ್ಲಿ ಸಭೆ ನಡೆಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಈ ಸಂಬಂಧ ಮೂರು ವಾರಗಳಲ್ಲಿ ವರದಿ ಸಲ್ಲಿಸುವಂತೆಯೂ ಸೂಚನೆ ನೀಡಲಾಗಿದೆ.