
ಇತ್ತೀಚೆಗಷ್ಟೇ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್ ಅನ್ನು ವ್ಯಕ್ತಿಯೊಬ್ಬ ಅಪಹರಿಸಿಕೊಂಡು ಬಂದು ಅದನ್ನು ಕರ್ನಾಟಕದ ಗಡಿ ಭಾಗದಲ್ಲಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು.
ಇದೀಗ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕಳ್ಳತನವಾಗಿದೆ. ಇಂತಹದೊಂದು ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ್ದ ಬಸ್ (ಕೆಎ 38 ಎಫ್ 971) ಸೋಮವಾರ ತಡರಾತ್ರಿ ಕಳವು ಮಾಡಲಾಗಿದ್ದು, ಇದನ್ನು ಮಿರಿಯಾಣ ಮಾರ್ಗವಾಗಿ ತಾಂಡೂರು ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಚಿಂಚೋಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಬಸ್ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.