
ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ ಅಪರಿಚಿತ ವಾಹನ ನೋಂದಣಿ ಸಂಖ್ಯೆ ಹೊಂದಿಲ್ಲದೆ ಇರುವುದು ಕಂಡುಬಂದಿದ್ದು, ಹೀಗಾಗಿ ಕೊಲೆ ಉದ್ದೇಶದಿಂದಲೇ ಡಿಕ್ಕಿ ಹೊಡೆಸಿ ಪರಾರಿಯಾಗಿರಬಹುದು ಎಂಬ ಶಂಕೆ ಪೊಲೀಸರಿಂದ ವ್ಯಕ್ತವಾಗಿದೆ.
ಇಂಟಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ 87 ವರ್ಷದ ಆರ್.ಎನ್. ಕುಲಕರ್ಣಿ ಶುಕ್ರವಾರ ಸಂಜೆ ವಾಯು ವಿಹಾರ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದರು.
ಆರಂಭದಲ್ಲಿ ಪೊಲೀಸರು ಇದೊಂದು ಅಪಘಾತ ಪ್ರಕರಣ ಎಂದೇ ಭಾವಿಸಿದ್ದರು. ಆದರೆ ಕೂಲಂಕುಶ ಪರಿಶೀಲನೆ ವೇಳೆ ಬೆಚ್ಚಿ ಬೀಳಿಸುವ ಸಂಗತಿ ಬಹಿರಂಗವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಈಗ ಮೂರು ತಂಡಗಳನ್ನು ರಚಿಸಲಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.