
ಏಪ್ರಿಲ್ 4ರಂದು ಮಹಾವೀರ ಜಯಂತಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಇದನ್ನು ಉಲ್ಲಂಘಿಸಿದ ಮೂರು ಅಂಗಡಿಗಳ ಮೇಲೆ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸವರ್ ಲೈನ್ ರಸ್ತೆಯಲ್ಲಿರುವ ಎರಡು ಕೋಳಿ ಮಾಂಸದ ಅಂಗಡಿ ಹಾಗೂ ಒಂದು ಕುರಿ ಮಾಂಸದ ಅಂಗಡಿ ಮೇಲೆ ಮಹಾನಗರ ಪಾಲಿಕೆ ಪಶು ವೈದ್ಯಾಧಿಕಾರಿ ಡಾ. ರೇಖಾ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶವನ್ನು ಉಲ್ಲಂಘಿಸಿದ ಕಾರಣಕ್ಕೆ ಈ ಅಂಗಡಿಗಳಿಗೆ ನೋಟಿಸ್ ನೀಡಲಾಯಿತಲ್ಲದೇ ಬೀಗ ಮುದ್ರೆ ಹಾಕಲಾಗಿದೆ.