ನೀಟ್ – ಜೆಇಇ – ಸಿಇಟಿ ಪರೀಕ್ಷೆಗಳನ್ನು ಬರೆದು ಪ್ರವೇಶ ಪಡೆದುಕೊಳ್ಳುವ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಇಂತಹ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಕುರಿತು ಚಿಂತನೆ ನಡೆಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡದ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ರೈತ ವಿದ್ಯಾನಿಧಿ ಪಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ್ದಾರೆ.
ರೈತ ವಿದ್ಯಾ ನಿಧಿಯ ಮೊತ್ತವನ್ನು ಹೆಚ್ಚಿಸಬೇಕು ಎಂದು ವಿದ್ಯಾರ್ಥಿನಿಯೊಬ್ಬರು ಪ್ರಸ್ತಾಪಿಸಿದ ವೇಳೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ‘ಮುಖ್ಯಮಂತ್ರಿ ಮಾರ್ಗದರ್ಶಿ’ ಆಪ್ ಸಹ ಸಿದ್ಧಪಡಿಸಲಾಗಿದೆ ಎಂದಿದ್ದಾರೆ.