ಪ್ರಸಕ್ತ ಸಾಲಿನ ನೀಟ್ ಸ್ನಾತಕೋತ್ತರ ಪರೀಕ್ಷೆ ಮೇ 21ರಂದು ನಿಗದಿಯಾಗಿದ್ದು, ಆದರೆ ಕೆಲವು ಕಿಡಿಗೇಡಿಗಳು ಈ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿಬಿಟ್ಟಿದ್ದರು.
ಈ ಕುರಿತಂತೆ ಇದೀಗ ಕೇಂದ್ರ ವಾರ್ತಾ ಇಲಾಖೆ ಸ್ಪಷ್ಟನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು. ನೀಟ್ ಸ್ನಾತಕೋತ್ತರ ಪರೀಕ್ಷೆಯನ್ನು ಮುಂದೂಡಲಾಗಿಲ್ಲ. ನಿಗದಿಯಂತೆ ಮೇ 21 ರಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಕಿಡಿಗೇಡಿಗಳು ಮೇ 21ರಂದು ನಡೆಯಲಿರುವ ಪರೀಕ್ಷೆಯನ್ನು ಜುಲೈ 9ಕ್ಕೆ ಮುಂದೂಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ಪರೀಕ್ಷೆಯನ್ನು ಮುಂದೂಡಲಾಗಿಲ್ಲ. ನಿಗದಿಯಂತೆ ಮೇ 21ರಂದು ನೀಟ್ ಸ್ನಾತಕೋತ್ತರ ಪರೀಕ್ಷೆ ನಡೆಯಲಿದೆ ಎಂದು ಈಗ ತಿಳಿಸಲಾಗಿದೆ.