alex Certify ನುಡಿದಂತೆ ನಡೆದ HDK; ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನುಡಿದಂತೆ ನಡೆದ HDK; ಜೆಡಿಎಸ್ ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಅನ್ನು ಸಾಮಾನ್ಯ ಕಾರ್ಯಕರ್ತನಿಗೆ ನೀಡುವುದಾಗಿ ಆರಂಭದಿಂದಲೂ ಹೇಳಿಕೊಂಡು ಬಂದಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಾವು ನುಡಿದಂತೆ ನಡೆದುಕೊಂಡಿದ್ದಾರೆ.

ಶುಕ್ರವಾರದಂದು ಜೆಡಿಎಸ್ ಎರಡನೇ ಪಟ್ಟಿ ಪ್ರಕಟಗೊಂಡಿದ್ದು, ಇದರಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಸ್ವರೂಪ್ ಅವರಿಗೆ ನೀಡಲಾಗಿದೆ. ತಮ್ಮ ಪತ್ನಿ ಭವಾನಿ ಅವರಿಗೆ ಟಿಕೆಟ್ ಕೊಡಿಸಲು ಎಚ್.ಡಿ. ರೇವಣ್ಣ ನಿರಂತರವಾಗಿ ಪ್ರಯತ್ನ ನಡೆಸಿದ್ದರಾದರೂ ಸಫಲವಾಗಲಿಲ್ಲ.

ಶುಕ್ರವಾರದಂದು ಎಚ್.ಡಿ. ರೇವಣ್ಣ ಅವರ ಮೂಲಕವೇ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿಸಲಾಗಿದ್ದು, ಈ ಮೂಲಕ ನಮ್ಮಿಬ್ಬರ ನಡುವೆ ಯಾವುದೇ ಅಸಮಾಧಾನವಿಲ್ಲ ಎಂಬ ಸಂದೇಶವನ್ನು ಹೆಚ್.ಡಿ.ಕೆ. ರವಾನಿಸಿದ್ದಾರೆ. ಜೊತೆಗೆ ಈ ವಿದ್ಯಮಾನ ಜೆಡಿಎಸ್ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ಹೆಚ್ಚಲೂ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...