ನವದೆಹಲಿ: ನೂತನ ಸಂಸತ್ ಭವನ ಕಟ್ಟಡದ ಶಂಕು ಸ್ಥಾಪನೆಗೆ ಪ್ರಧಾನಿ ಮೋದಿ ಭೂಮಿ ಪೂಜೆ ನೆರವೇರಿಸಿದ್ದಾರೆ.
ಶೃಂಗೇರಿ ಮಠದ ಆರು ಅರ್ಚಕರ ನೇತೃತ್ವದಲ್ಲಿ ನೂತನ ಕಟ್ಟಡದ ಶಿಲಾನ್ಯಾಸ ಪೂಜಾ ವಿಧಿವಿಧಾನ ನೆರವೇರಿತು. 971 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ನೂತನ ಸಂಸತ್ ಭವನ ಕಟ್ಟಡ ನಿರ್ಮಾಣವಾಗಲಿದೆ.
ನಾಲ್ಕು ಅಂತಸ್ತಿನ ನೂತನ ಸಂಸತ್ ಕಟ್ಟಡದ ಕಾಮಗಾರಿ 2022ರೊಳಗೆ ಪೂರ್ಣಗೊಳ್ಳಲಿದೆ. ಶಿಲನ್ಯಾಸ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.