ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೇರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆದಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ರೇಸ್ ನಲ್ಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಇಂದು ಬಹಿರಂಗವಾಗುವ ನಿರೀಕ್ಷೆ ಇದೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿ ಅಧಿಕಾರಕ್ಕೇರಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ಕಸರತ್ತು ನಡೆದಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ರೇಸ್ ನಲ್ಲಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಇಂದು ಬಹಿರಂಗವಾಗುವ ನಿರೀಕ್ಷೆ ಇದೆ.
ಇದರ ಮಧ್ಯೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಈಗಾಗಲೇ ಸ್ಪಷ್ಟ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಪಕ್ಷೇತರವಾಗಿ ಆಯ್ಕೆಯಾಗಿರುವ ಶಾಸಕಿಯ ಬೆಂಬಲವೂ ಸಿಕ್ಕಿದೆ. ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಲತಾ ಮಲ್ಲಿಕಾರ್ಜುನ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ ಬೆಂಬಲವನ್ನು ಘೋಷಿಸಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರ ಪುತ್ರಿ ಲತಾ ಮಲ್ಲಿಕಾರ್ಜುನ್, ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಕರುಣಾಕರ ರೆಡ್ಡಿ ಅವರನ್ನು 13,000ಕ್ಕೂ ಅಧಿಕ ಮತಗಳಿಂದ ಪರಾಭವಗೊಳಿಸಿದ್ದು, ಭಾನುವಾರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿಯಾಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.