ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬುದನ್ನು ಅರಿತು ಅವರನ್ನು ತಿದ್ದಿ ತೀಡಿ ಸತ್ಪ್ರಜೆಗಳನ್ನಾಗಿ ಮಾಡಲು ಪ್ರಯತ್ನಿಸುತ್ತಾರೆ. ಹಾಗೆಯೇ ವಿದ್ಯಾರ್ಥಿಗಳ ಮುಂದಿನ ಉತ್ತಮ ಭವಿಷ್ಯಕ್ಕೆ ಬುನಾದಿ ಹಾಕಿಕೊಡುತ್ತಾರೆ.
ಹೀಗಾಗಿ ಗುರು – ಶಿಷ್ಯರ ನಡುವೆ ಒಂದು ಅವಿನಾಭಾವ ಸಂಬಂಧ ಇರುತ್ತದೆ. ತಾವು ಇಂದಿನ ಈ ಮಟ್ಟಕ್ಕೇರಲು ತಮ್ಮ ಶಿಕ್ಷಕರೇ ಕಾರಣ ಎಂಬುದನ್ನು ಬಹುತೇಕ ವಿದ್ಯಾರ್ಥಿಗಳು ಸ್ಮರಿಸಿಕೊಳ್ಳುತ್ತಾರೆ. ಅಲ್ಲದೆ ಅವಕಾಶ ಸಿಕ್ಕಾಗ ನೆಚ್ಚಿನ ಶಿಕ್ಷಕರನ್ನು ಸನ್ಮಾನಿಸಿ ಸಾರ್ಥಕ ಭಾವ ಹೊಂದುತ್ತಾರೆ.
ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು, ಗುರು – ಶಿಷ್ಯರ ನಡುವೆ ಇರುವ ಬಾಂಧವ್ಯ ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ. ಕೇರಳದಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾದ ಈ ವಿಡಿಯೋದಲ್ಲಿ ಹಳೆ ವಿದ್ಯಾರ್ಥಿಗಳ ಒಂದು ಗುಂಪು ತಮ್ಮ ನೆಚ್ಚಿನ ಶಿಕ್ಷಕಿಯ ಮನೆಗೆ ಹೋಗಿದೆ.
ಅಲ್ಲಿ ಹೋದ ಇವರುಗಳು ತಮ್ಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡಿದ್ದಾರೆ. ತಮ್ಮನ್ನು ತಿದ್ದಿ ತೀಡಲು ಶಿಕ್ಷಕಿ ಹೇಗೆ ಹೊಡೆಯುತ್ತಿದ್ದರು ಎಂಬುದನ್ನು ಸ್ಮರಿಸಿಕೊಂಡು ಅವರ ಕೈಗೆ ಕೋಲೊಂದನ್ನು ಕೊಟ್ಟು ಕೈಚಾಚಿದ್ದಾರೆ. ಆ ಶಿಕ್ಷಕಿ ಮೆತ್ತಗೆ ಒಂದು ಏಟು ಕೊಡುತ್ತಿದ್ದಂತೆ ಅಂದಿನ ದಿನಗಳನ್ನು ನೆನಪಿಸಿಕೊಂಡು ಭಾವುಕರಾಗಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
https://youtu.be/h7YIJrkCVZM