alex Certify ನೆಲ್ಲಿಕಾಯಿಯಿಂದಲೂ ಇದೆ ಅನಾನುಕೂಲ, ಸೇವನೆಗೂ ಮುನ್ನ ಅದರ ದುಷ್ಪರಿಣಾಮ ತಿಳಿದುಕೊಳ್ಳಿ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆಲ್ಲಿಕಾಯಿಯಿಂದಲೂ ಇದೆ ಅನಾನುಕೂಲ, ಸೇವನೆಗೂ ಮುನ್ನ ಅದರ ದುಷ್ಪರಿಣಾಮ ತಿಳಿದುಕೊಳ್ಳಿ!

ನೆಲ್ಲಿಕಾಯಿಯನ್ನು ಆರೋಗ್ಯದ ನಿಧಿ ಎಂದು ಪರಿಗಣಿಸಲಾಗುತ್ತದೆ. ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ನೆಲ್ಲಿಕಾಯಿ ಸೇವನೆ ಮಾಡುವಂತೆ ಆರೋಗ್ಯ ತಜ್ಞರು ಕೂಡ ಶಿಫಾರಸು ಮಾಡ್ತಾರೆ. ಉತ್ಕರ್ಷಣ ನಿರೋಧಕಗಳು ಮತ್ತು ಅನೇಕ ರೀತಿಯ ಪೋಷಕಾಂಶಗಳು ಇದರಲ್ಲಿ ಕಂಡುಬರುತ್ತವೆ. ಆದರೆ ಕೆಲವೊಮ್ಮೆ ನೆಲ್ಲಿಕಾಯಿ ನಮಗೆ ಹಾನಿಯನ್ನು ಉಂಟುಮಾಡಬಹುದು. ಯಾಕಂದ್ರೆ ನೆಲ್ಲಿಕಾಯಿ ಕೂಡ ಅನೇಕ ಅಡ್ಡ ಪರಿಣಾಮಗಳನ್ನು ಸಹ ಹೊಂದಿದೆ.

ನೆಲ್ಲಿಕಾಯಿ ಸೇವನೆಯ ಪ್ರಯೋಜನಗಳು

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೆಲ್ಲಿಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತವೆ, ಇದು ದೇಹವನ್ನು ಅನಾರೋಗ್ಯದಿಂದ ರಕ್ಷಿಸುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿಯನ್ನು ಸೇವನೆ ಮಾಡಬೇಕು.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವುದರಿಂದ ನೆಲ್ಲಿಕಾಯಿ ಒತ್ತಡ, ಉರಿಯೂತವನ್ನು ಕಡಿಮೆ ಮಾಡುತ್ತದೆ. ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ನೆಲ್ಲಿಕಾಯಿ ಕೂದಲಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಅನೇಕ ಉತ್ಪನ್ನಗಳು ಮತ್ತು ಚಿಕಿತ್ಸೆಗಳಲ್ಲಿ ಬಳಸಲಾಗುತ್ತದೆ. ಕೂದಲಿನ ಬೆಳವಣಿಗೆಯನ್ನು ನೆಲ್ಲಿಕಾಯಿ ಹೆಚ್ಚಿಸಬಲ್ಲದು. ನೆಲ್ಲಿಕಾಯಿ ಬಳಕೆಯಿಂದ ಕೂದಲು ಬಲಗೊಳ್ಳುತ್ತದೆ ಮತ್ತು ತಲೆಹೊಟ್ಟು ಕಡಿಮೆಯಾಗುತ್ತದೆ.

ನೆಲ್ಲಿಕಾಯಿಯನ್ನು ಚರ್ಮಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಸುಕ್ಕುಗಳು ಮತ್ತು ಮೊಡವೆಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

ನೆಲ್ಲಿಕಾಯಿ ಜೀರ್ಣಕ್ರಿಯೆಗೆ ಕೂಡ ಸಹಕಾರಿ. ಮಲಬದ್ಧತೆ ಹಾಗೂ  ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಪರಿಹರಿಸಬಲ್ಲದು. ಹೆಚ್ಚಿನ ಫೈಬರ್ ಇರುವ ಕಾರಣ ನೆಲ್ಲಿಕಾಯಿ ಆರೋಗ್ಯಕರ ಕರುಳಿನ ಬ್ಯಾಕ್ಟೀರಿಯಾವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ನೆಲ್ಲಿಕಾಯಿ ಹೃದಯಕ್ಕೂ ಪ್ರಯೋಜನಕಾರಿ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ನೆಲ್ಲಿಕಾಯಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, ಇದು ಮಧುಮೇಹಕ್ಕೂ ಪ್ರಯೋಜನಕಾರಿ.

ನೆಲ್ಲಿಕಾಯಿಯ ಅನಾನುಕೂಲಗಳು

ನೆಲ್ಲಿಕಾಯಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಅದು ಹೊಟ್ಟೆಯಲ್ಲಿ ಸಮಸ್ಯೆ ಉಂಟುಮಾಡಬಹುದು. ಅತಿಸಾರ ಮತ್ತು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಇದರಿಂದಾಗುತ್ತವೆ.

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಲ್ಲಿರುವ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಆಮ್ಲೀಯವಾಗಿರುತ್ತದೆ. ಇದು ಆಸಿಡ್ ರಿಫ್ಲಕ್ಸ್, ಗ್ಯಾಸ್ಟ್ರಿಕ್ ಅಲ್ಸರ್‌ಗೆ ಕಾರಣವಾಗುವ ಸಾಧ್ಯತೆ ಇರುತ್ತದೆ.

ಆಕ್ಸಲೇಟ್ ಕೂಡ ನೆಲ್ಲಿಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಮೂತ್ರಪಿಂಡದ ಸಮಸ್ಯೆಗೆ ಕಾರಣವಾಗಬಹುದು. ನೆಲ್ಲಿಕಾಯಿ ಸೇವನೆಯು ಕೆಲವರಲ್ಲಿ ಅಲರ್ಜಿಯನ್ನು ಉಂಟುಮಾಡುತ್ತದೆ. ತುರಿಕೆ, ದದ್ದು, ಉಸಿರಾಟದ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...