ಮೈಸೂರು: ಎ ಎಸ್ ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಜರಾಬಾದ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಎ ಎಸ್ ಐ ನಂಜೇಗೌಡ ಅವರ ಪತ್ನಿ 40 ವರ್ಷದ ಜ್ಯೋತಿ ಆತ್ಮಹತ್ಯೆಗೆ ಶರಣಾದವರು. ದೇಹದ ತೂಕ ಹೆಚ್ಚಾಗಿ ಬೆನ್ನು ನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆ ಪಡೆಯುತ್ತಿದ್ದರೂ ಕಡಿಮೆಯಾಗಿರಲಿಲ್ಲ. ಬೆನ್ನುನೋವಿಗೆ ಬೇಸತ್ತು ಜ್ಯೋತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.