ಶಿವಮೊಗ್ಗ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದಲ್ಲಿ ಗುರುವಾರ ಘಟನೆ ನಡೆದಿದೆ.
ಜನ್ನಾಪುರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಕೆ.ಎಸ್. ಮಧು(27) ಮತ್ತು ಅವರ ಪತ್ನಿ ಮೋನಿಕಾ(21) ಮೃತಪಟ್ಟವರು. ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಗುರುವಾರ ದಂಪತಿ ಬಹಳ ಹೊತ್ತಾದರೂ ಮನೆಯಿಂದ ಹೊರಗೆ ಬಾರದ ಹಿನ್ನೆಲೆಯಲ್ಲಿ ಅಕ್ಕಪಕ್ಕದವರಿಗೆ ಅನುಮಾನ ಬಂದು ಬಾಗಿಲು ತೆಗೆದು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಪತ್ತೆಯಾಗಿದ್ದಾರೆ. ನ್ಯೂಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.