
ಟ್ವಿಟರ್ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸರ್ಕಾರಿ ಬಸ್ನಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಕಾಣಬಹುದಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬಸ್‌ನ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಬೆಂಕಿಯ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಎರಡೂ ಕಡೆಯಿಂದ ಬರುವ ಮಾರ್ಗಗಳನ್ನು ನಿರ್ಬಂಧಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.