ಮೆಜೆಸ್ಟಿಕ್ ನಿಂದ ಬನಶಂಕರಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಇದ್ದಕ್ಕಿದ್ದಂತೆ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ನಡೆದಿದೆ.
ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಸಮಯಪ್ರಜ್ಞೆ ಮೆರೆದ ಚಾಲಕ ಪ್ರಯಾಣಿಕರನ್ನು ತಕ್ಷಣವೇ ಕೆಳಗಿಳಿಸಿದ್ದು, ಇದರಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬಸ್ ಗೆ ಆವರಿಸಿದ್ದ ಬೆಂಕಿ ನಂದಿಸಿತಾದರೂ ಅಷ್ಟರಲ್ಲಾಗಲೇ ಬಸ್ಸಿಗೆ ಒಂದಷ್ಟು ಹಾನಿ ಸಂಭವಿಸಿತ್ತು ಎಂದು ಹೇಳಲಾಗಿದೆ.