ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ.
ದೆಹಲಿಯ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ರಾವತ್ ದಂಪತಿ ಅಂತ್ಯಕ್ರಿಯೆ ನೆರವೇರಿದ್ದು, ಸೇನಾಪಡೆಗಳಿಂದ ಗೌರವ ನಮನ ಸಲ್ಲಿಸಲಾಯಿತು. ಭೂತಾನ್, ನೇಪಾಳ, ಶ್ರೀಲಂಕಾದ ಮೂರು ಸೇನೆಯ ದಂಡನಾಯಕರು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್, ಫ್ರಾನ್ಸ್ ರಾಯಭಾರಿ, ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
BIG BREAKING: ಒಂದೇ ಚಿತೆಯಲ್ಲಿ ಪಂಚಭೂತಗಳಲ್ಲಿ ಲೀನರಾದ CDS ಬಿಪಿನ್ ರಾವತ್ ದಂಪತಿ, ಪುತ್ರಿಯರಿಂದ ಅಗ್ನಿಸ್ಪರ್ಶ
ಸೇನೆಯಿಂದ 17 ಸುತ್ತು ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ಇಬ್ಬರ ಪಾರ್ಥೀವ ಶರೀರವನ್ನು ಒಂದೇ ಚಿತೆಯಲ್ಲಿರಿಸಿ, ಇಬ್ಬರು ಪುತ್ರಿಯರು ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ 800 ಜನರಿಗಷ್ಟೇ ಭಾಗಿಯಾಗಲು ಅವಕಾಶ ನೀಡಲಾಗಿತ್ತು.