ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿಗಾಗಿ ಆಗ್ರಹಿಸಿ ನಡೆಸುವ ಹೋರಾಟ ಕೈಬಿಡುವಂತೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಮೀಸಲಾತಿ ವಿಚಾರವಾಗಿ ಕೆಲ ಅಂಶಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ. ನಮ್ಮ ಮುಂದಿನ ನಡೆ ಹಾಗೂ ಹೋರಾಟದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಸೇರುದಂತೆ ಸಮುದಾಯದ ಮುಖಂಡರ ಜೊತೆ ಮತ್ತೊಮ್ಮೆ ಚರ್ಚೆ ನಡೆಸುತ್ತೇವೆ. ಜನಪ್ರತಿನಿಧಿಗಳು ಏನು ಹೇಳುತ್ತಾರೋ ಆ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ಮತ್ತೆ ಬೆಲೆ ಏರಿಕೆ ಬಿಸಿ – 43.50 ರೂ. ಹೆಚ್ಚಾಯ್ತು ಸಿಲಿಂಡರ್ ಬೆಲೆ
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಆಗ್ರಹಿಸಿ ಸರ್ಕಾರಕ್ಕೆ ನೀಡಲಾಗಿರುವ ಗಡುವಿನ ಬಗ್ಗೆಯೂ ಚರ್ಚಿಸಿದರು ಎನ್ನಲಾಗಿದೆ. ಈ ವೇಳೆ ಸಚಿವ ಸಿ.ಸಿ. ಪಾಟೀಲ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.