
ಪ್ರಸ್ತುತ ಫಲಿತಾಂಶದ ಪ್ರಕಾರ ಕಾಂಗ್ರೆಸ್ ಎಲ್ಲಾ ಐದು ರಾಜ್ಯಗಳನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ, ಜನರ ಆದೇಶವನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಮತದಾರ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುತ್ತದೆ ಎಂದಿದ್ದಾರೆ.
ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ಈ ಐದು ರಾಜ್ಯಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಪಂಜಾಬ್‌ನಲ್ಲಿ ಎಎಪಿ ಭರ್ಜರಿ ಗೆಲುವು ದಾಖಲಿಸಲು ಸಜ್ಜಾಗಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಆರಾಮಾಗಿ ಪುನರಾಗಮನ ಮಾಡುತ್ತಿದೆ.
ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇವೆ. ಜನಾದೇಶದಿಂದ ಗೆದ್ದವರಿಗೆ ಶುಭಾಶಯಗಳು. ಚುನಾವಣೆಯಲ್ಲಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು, ಸ್ವಯಂಸೇವಕರಿಗೆ ನನ್ನ ಕೃತಜ್ಞತೆಗಳು. ಕಾಂಗ್ರೆಸ್ ಪಕ್ಷ ಇದರಿಂದ ಕಲಿಯುತ್ತದೆ. ಮುಂದಿನ ದಿನಗಳಲ್ಲಿಯೂ ಪಕ್ಷ, ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.