ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರದ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬಳಿಕ ರಾಜೀನಾಮೆಯನ್ನು ಕೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರದ ಪಿಸಿಸಿ ಅಧ್ಯಕ್ಷರನ್ನು ಪಿಸಿಸಿ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವಂತೆ ಕೇಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ಇತ್ತೀಚಿಗೆ ಮುಕ್ತಾಯಗೊಂಡ ಪಂಚ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಪರಾಮರ್ಶೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ರಚನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲು ಸೋನಿಯಾ ಗಾಂಧಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.