alex Certify ಪಂಚ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರ ಬಳಿ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚ ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರ ಬಳಿ ರಾಜೀನಾಮೆ ಕೇಳಿದ ಸೋನಿಯಾ ಗಾಂಧಿ

ಕಾಂಗ್ರೆಸ್​ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್​, ಪಂಜಾಬ್, ಗೋವಾ ಹಾಗೂ ಮಣಿಪುರದ ಕಾಂಗ್ರೆಸ್​​ ರಾಜ್ಯಾಧ್ಯಕ್ಷರ ಬಳಿಕ ರಾಜೀನಾಮೆಯನ್ನು ಕೇಳಿದ್ದಾರೆ.

ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಉತ್ತರ ಪ್ರದೇಶ, ಉತ್ತರಾಖಂಡ್​, ಪಂಜಾಬ್​, ಗೋವಾ ಹಾಗೂ ಮಣಿಪುರದ ಪಿಸಿಸಿ ಅಧ್ಯಕ್ಷರನ್ನು ಪಿಸಿಸಿ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವಂತೆ ಕೇಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲಾ ಟ್ವಿಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚಿಗೆ ಮುಕ್ತಾಯಗೊಂಡ ಪಂಚ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಪರಾಮರ್ಶೆ ನಡೆಸಲು ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸಭೆ ಕರೆದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪಕ್ಷದ ರಚನೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲು ಸೋನಿಯಾ ಗಾಂಧಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...