alex Certify ಪಂಜಾಬ್​ ಚುನಾವಣೆಯಲ್ಲಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ಗೆ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್​ ಚುನಾವಣೆಯಲ್ಲಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ಗೆ ಸೋಲು

ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಪಟಿಯಾಲ ಕ್ಷೇತ್ರದಲ್ಲಿ 13 ಸಾವಿರ ಮತಗಳ ಅಂತರದಲ್ಲಿ ಸೋಲನ್ನು ಕಂಡಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದ ಅಮರೀಂದರ್​ ಸಿಂಗ್​ರನ್ನು ಆಮ್​ ಆದ್ಮಿ ಪಕ್ಷದ ಅಜಿತ್​ ಪಾಲ್​ ಸಿಂಗ್​ ಕೊಹ್ಲಿ ಸೋಲಿಸಿದ್ದಾರೆ.

ಹಿಂದಿನ ಬಾರಿ ಪಂಜಾಬ್​ ವಿಧಾನಸಭಾ ಚುನಾವಣೆಯಲ್ಲಿ ಅಮರೀಂದರ್​ ಸಿಂಗ್​ ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆಮ್​ ಆದ್ಮಿ ಪಕ್ಷದ ಅಜಿತ್​ ಪಾಲ್​ ಸಿಂಗ್​ ಕೊಹ್ಲಿ, ಕ್ಯಾಪ್ಟನ್​ ಅಮರೀಂದರ್ ಸಿಂಗ್​ರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಪ್ಟನ್​ ಅಮರೀಂದರ್ ಸಿಂಗ್​ ಈ ಹಿಂದೆ 50 ಸಾವಿರ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದರು.

ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಬಳಿಕ ಪಂಜಾಬ್​ ಲೋಕ್​ ಕಾಂಗ್ರೆಸ್​ ಎಂಬ ಪಕ್ಷವನ್ನು ಸ್ಥಾಪಿಸಿದ್ದಾರೆ. ಇದೇ ಪಕ್ಷದಿಂದ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...