
ಶ್ವಾನ ಬೊಗಳಿದ್ದಕ್ಕೆ ಸಿಟ್ಟಿಗೆದ್ದಿದ್ದ ಈ ವ್ಯಕ್ತಿಯ ಪಕ್ಕದ ಮನೆಯ ಮೂವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾನೆ. ಮೊದಲು ನಾಯಿಯ ಮೇಲೆ ಹಲ್ಲೆ ನಡೆಸಿದ ಈತ ಬಳಿಕ ನಾಯಿಯ ಮಾಲೀಕರಿಗೂ ರಕ್ತ ಬರುವಂತೆ ಹೊಡೆದಿದ್ದಾನೆ. ಇದನ್ನು ತಪ್ಪಿಸಲು ಬಂದ ಕುಟುಂಬಸ್ಥರ ಮೇಲೂ ಈತ ರಾಡ್ನಿಂದ ಹಲ್ಲೆಗೈದಿದ್ದಾನೆ.
ಕಬ್ಬಿಣದ ರಾಡ್ನಿಂದ ವ್ಯಕ್ತಿಯು ಪಕ್ಕದ ಮನೆಯವರ ಮೇಲೆ ಹಲ್ಲೆ ನಡೆಸುತ್ತಿರುವ ಸಂಪೂರ್ಣ ದೃಶ್ಯವು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.