alex Certify ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷದ ಚಿಹ್ನೆ ಬಳಸಿ ಫೇಸ್ಬುಕ್ ನಲ್ಲಿ SSLC ವಿದ್ಯಾರ್ಥಿಗಳಿಗೆ ಶುಭ ಹಾರೈಕೆ; ಬಿಜೆಪಿ ಶಾಸಕ ಬೋಪಯ್ಯಗೆ ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮಂಗಳವಾರದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10ರಂದು ಮತದಾನ ನಡೆಯಲಿದ್ದು ಮೇ 13ರಂದು ಮತ ಎಣಿಕೆ ನಿಗದಿಯಾಗಿದೆ.

ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗ ರಾಜಕೀಯ ಮುಖಂಡರ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಟ್ಟಿದ್ದು, ಪತ್ರಿಕೆ, ಮಾಧ್ಯಮ, ಸಾಮಾಜಿಕ ಜಾಲತಾಣ ಸೇರಿದಂತೆ ಇತರ ಮೂಲಗಳಿಂದ ಯಾವುದೇ ರಾಜಕೀಯ ಪ್ರಚಾರ ಮತ್ತು ರಾಜಕೀಯ ಪ್ರೇರಿತ ಹೇಳಿಕೆ ನೀಡಬೇಕಾದಲ್ಲಿ ಜಿಲ್ಲಾ ಮೀಡಿಯಾ ಮಾನಿಟರಿಂಗ್ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕಿದೆ.

ಆದರೆ ಈ ರೀತಿ ಪೂರ್ವಾನುಮತಿ ಪಡೆಯದೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪಕ್ಷದ ಚಿಹ್ನೆ ಬಳಸಿ ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ವಿರಾಜಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...