ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ 2ದಿನಗಳ ಬಿಜೆಪಿ ಕಾರ್ಯಕಾರಿಣಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಶಾಸಕರು ಸಂಸದರು ವಿಧಾನಪರಿಷತ್ ಸಚಿವರು ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಪಕ್ಷದ ಸಚಿವರು ಶಾಸಕರು ಮತ್ತು ಕಾರ್ಯಕರ್ತರಿಗೆ ಪಕ್ಷದ ಶಿಸ್ತು ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದ್ದಾರೆ.
ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ, ಪಕ್ಷದ ಶಿಸ್ತು ಮೀರಿದರೆ ಸಹಿಸುವುದಿಲ್ಲ, ಅಶಿಸ್ತು ಉಂಟುಮಾಡಿದವರನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ, ಪಕ್ಷದ ಸಾಮಾನ್ಯ ಕಾರ್ಯಕರ್ತರು, ಶಾಸಕರು, ಸಚಿವರು, ಸಿಎಂ ಯಾರಾಗಿದ್ದರು ಪಕ್ಷದ ವರ್ಚಸ್ಸಿಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.