ಬೆಳಗಾವಿ: ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಶಾಸಕ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಗೆ ಟಿಕೆಟ್ ಕೈತಪ್ಪಿದ್ದು, ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಈ ವೇಳೆ ಮಾತನಾಡಿದ ಲಖನ್ ಜಾರಕಿಹೊಳಿ, ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಪಂಚಾಯಿತಿ ಅಭಿವೃದ್ಧಿಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಇದು ನನ್ನ ಶಕ್ತಿ ಪ್ರದರ್ಶನವಲ್ಲ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರಷ್ಟೇ. ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಏನೇ ಹೇಳಲಿ ಅವರು ನಮ್ಮ ಅಣ್ಣ. ನಮಗೆ ಈ ಚುನಾವಣೆಯಲ್ಲಿ ಕಾಂಪಿಟೇಟರ್ ಯಾರೂ ಇಲ್ಲ ಎಂದು ಹೇಳಿದರು.