ಶಿವಮೊಗ್ಗ: ಶಾಲಾ ಮಕ್ಕಳ ಪಠ್ಯ ಕಡಿತ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ಮಕ್ಕಳಿಗೆ ತೊಂದರೆಯಾಗಲಿದೆ ಹಾಗಾಗಿ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.
ಕೋವಿಡ್ ಕಾರಣಗಳಿಂದಾಗಿ ಒಂದುವರೆ ವರ್ಷದಿಂದ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಇದನ್ನು ಬ್ರಿಡ್ಜ್ ಕೋರ್ಸ್ ಗಳ ಮೂಲಕ ಪೂರ್ಣಗೊಳಿಸಬೇಕಿದೆ. ಶಿಕ್ಷಕರ ಸಹಕಾರದ ಮೇಲೆ ತೀರ್ಮಾನಿಸಲಾಗುತ್ತದೆ. ಪಠ್ಯ ಕಡಿತದ ಬಗ್ಗೆ ಸದ್ಯ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಹೇಳಿದರು.
BIG NEWS: ನಟ ಸಾಯಿ ಧರಮ್ ತೇಜ್ ಅಪಘಾತ ಪ್ರಕರಣ; ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಇನ್ನು 1-5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತಾಗಿ ಶೀಘ್ರವೇ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗುವುದು. ಸಮಿತಿ ಅನುಮತಿ ನೀಡಿದರೆ ಪ್ರಾಥಮಿಕ ಶಾಲೆಗಳನ್ನು ಪುನರಾರಂಭಿಸಲಾಗುವುದು. ಈಗಗಾಲೇ 6-8ನೇ ತರಗತಿಗಳಿಗೆ ಭೌತಿಕ ತರಗತಿಗಳು ನಡೆಯುತ್ತಿವೆ ಎಂದರು.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ರಾಜ್ಯದಲ್ಲಿ ಕೋವಿಡ್ ಕೇಸ್ ಹೆಚ್ಚಳವಾದರೆ ಶಾಲೆಗಳನ್ನು ತಕ್ಷಣ ನಿಲ್ಲಿಸುವ ಅವಕಾಶವಿದೆ ಎಂದು ಹೇಳಿದರು.