ಬೆಂಗಳೂರು: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವರದಿ ಸಿದ್ದಪಡಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪಠ್ಯ ಪರಿಷ್ಕರಣೆ ವರದಿ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಠ್ಯ ಪರಿಷ್ಕರಣೆ ವರದಿ ಬಗ್ಗೆ ಚರ್ಚೆ ನಡೆಸಿ ಅಂತಿಮ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ಈ ವರ್ಷ ಸಂಪೂರ್ಣವಾಗಿ ಪಠ್ಯ ಪರಿಷ್ಕರಣೆ ಮಾಡುವ ಬದಲಿಗೆ, ವಿವಾದಿತ ಪಠ್ಯಗಳನ್ನು ಮಾತ್ರ ಕೈಬಿಡಲಾಗುವುದು. ನಂತರ ಪಠ್ಯ ಪರಿಷ್ಕರಣೆ ಸಮಿತಿ ರಚಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಸಂಪೂರ್ಣವಾಗಿ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ಸದ್ಯಕ್ಕೆ ವಿವಾದಿತ ಪಠ್ಯಗಳನ್ನು ಬೋಧನೆ ಮಾಡಿದಂತೆ ಸುತ್ತೋಲೆ ಹೊರಡಿಸಲಿದ್ದು, ಈ ಕುರಿತಾದ ವರದಿ ಸಿದ್ದಪಡಿಸಲಾಗಿದೆ. ಇಂದು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.