ಉಡುಪಿ: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಕೋಟಾ ಶ್ರೀನಿವಾಸ ಪೂಜಾರಿ, ಸರ್ಕಾರ ಯಾವಾಗಲೂ ವ್ಯಕ್ತಿಗತ ಆಧಾರದಲ್ಲಿ ನಡೆಯಲ್ಲ, ಸರ್ಕಾರ ಪರಿಶೀಲನೆ ಮಾಡದೇ ಪಠ್ಯ ಬದಲಿಸುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದದ್ದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಗ್ಡೆವಾರ್ ಪಾಠವನ್ನು, ಚಕ್ರವರ್ತಿ ಸೂಲಿಬೆಲೆ ಪಾಠವನ್ನೂ ಹಿಂಪಡೆಯುವುದಾಗಿ ಸರ್ಕಾರ ಹೇಳಿದೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲವನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ದಾರೆ.