ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ ಇಲ್ಲಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ಇಂಟರ್ನೆಟ್ ಸೌಲಭ್ಯ, ಅಂಚೆ ಇಲಾಖೆ ಮೂಲಕ ಬ್ಯಾಂಕ್ ಖಾತೆ ಓಪನ್, ಗ್ಯಾಸ್ ಸಿಲಿಂಡರ್, ದಿನ ಬಳಕೆ ವಸ್ತುಗಳು ಸೇರಿದಂತೆ ಹಲವು ಸೇವೆಗಳು ಲಭ್ಯವಾಗಲಿವೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಆರ್ಥಿಕ ವಹಿವಾಟು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಮುಂದಾಗಿದ್ದು, ಇದಕ್ಕಾಗಿ ಈಗಾಗಲೇ ಕೆಲ ಸಂಸ್ಥೆಗಳ ಜೊತೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಮಾರುಕಟ್ಟೆ ದರದಲ್ಲಿ ಐದು ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಲಭ್ಯವಾಗಲಿದ್ದು ಇದರ ಜೊತೆಗೆ ಸೋಪು, ಉಪ್ಪು, ಅಡಿಗೆ ಎಣ್ಣೆ ಸೇರಿದಂತೆ ದಿನ ಬಳಕೆ ವಸ್ತುಗಳು ಲಭ್ಯವಾಗಲಿವೆ. ಅಲ್ಲದೆ ಅಂಚೆ ಕಚೇರಿಗಳಲ್ಲಿ ಖಾತೆ ತೆರೆಯಲು ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.