
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಯಜಮಾನ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ತಾನ್ಯ ಹೋಪ್ ‘ಬಸಣ್ಣಿ ಬಾ’ ಹಾಡಿನ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿರುವ ತಾನ್ಯ ಹೋಪ್ ತಮ್ಮ ವೈಯಕ್ತಿಕ ವಿಚಾರವನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.
ನಟಿ ತಾನ್ಯ ಹೋಪ್ ಇದೀಗ ಬೀಚ್ ನಲ್ಲಿ ಫೋಟೋ ಶೂಟ್ ಮಾಡಿಸಿದ್ದು, ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಮಾದಕ ನೋಟದಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ನೆಟ್ಟಿಗರಿಂದ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.
ಸಿನಿಮಾ ವಿಚಾರಕ್ಕೆ ಬಂದರೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಚಿತ್ರದಲ್ಲಿ ತಾನ್ಯ ಹೋಪ್ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಈ ಸಿನಿಮಾ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದರಲ್ಲಿ ತೆರೆಕಂಡಿದೆ.


