alex Certify ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…!

ಪತಿ ಅಂತಿಮ ಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ನಿ ಸಹ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 91 ವರ್ಷದ ಶಿವಪುತ್ರಪ್ಪ ನೆಲಗುಡ್ಡ ಎಂಬವರು ನವಂಬರ್ 1ರಂದು ವಿಧಿವಶರಾಗಿದ್ದು, ಸಂಜೆ 4:00 ಗಂಟೆ ಸುಮಾರಿಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯುತ್ತಿತ್ತು.

ಈ ಸಂದರ್ಭದಲ್ಲಿ ಅವರ ಪತ್ನಿ 80 ವರ್ಷದ ಬಸಮ್ಮ ನೆಲಗುಡ್ಡ ಅವರನ್ನು ಕಾರಿನಲ್ಲಿ ಮೆರವಣಿಗೆ ಹಿಂದೆಯೇ ಕರೆದುಕೊಂಡು ಹೋಗುತ್ತಿದ್ದ ವೇಳೆ ಬಸಮ್ಮ ಮೃತ ಪಟ್ಟಿದ್ದಾರೆ.

ಕೂಡಲೇ ಮೆರವಣಿಗೆಯನ್ನು ಮೊಟಕುಗೊಳಿಸಿ ಸಾವಿನಲ್ಲೂ ಒಂದಾದ ಪತಿ – ಪತ್ನಿಯ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...