alex Certify ಪತಿ ಪರವಾಗಿ ಪತ್ನಿಯಿಂದ ನಾಮಪತ್ರ ಸಲ್ಲಿಕೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿ ಪರವಾಗಿ ಪತ್ನಿಯಿಂದ ನಾಮಪತ್ರ ಸಲ್ಲಿಕೆ….!

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಜಿಲ್ಲೆ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದು, ಹೀಗಾಗಿ ಧಾರವಾಡಕ್ಕೆ ಹೋಗದಂತಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಜಿಲ್ಲಾ ಪ್ರವೇಶಕ್ಕೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಅವರ ಪರವಾಗಿ ಪತ್ನಿ ಶಿವಲೀಲಾ ಕುಲಕರ್ಣಿ ಸೋಮವಾರದಂದು ನಾಮಪತ್ರ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿನಯ ಕುಲಕರ್ಣಿ ಅವರ ಜಿಲ್ಲಾ ಪ್ರವೇಶ ಕುರಿತಂತೆ ಮಂಗಳವಾರ ಕೋರ್ಟ್ ಆದೇಶ ಹೊರ ಬೀಳಲಿದೆ. ಒಂದೊಮ್ಮೆ ಅನುಮತಿ ಸಿಕ್ಕರೆ ಬೆಂಬಲಿಗರ ಜೊತೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...