alex Certify ಪತಿ ಸಾವಿನ ಬೆನ್ನಲ್ಲೇ ಹೃದಯಘಾತದಿಂದ ಪತ್ನಿಯೂ ಸಾವು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

 ಪತಿ ಸಾವಿನ ಬೆನ್ನಲ್ಲೇ ಹೃದಯಘಾತದಿಂದ ಪತ್ನಿಯೂ ಸಾವು…!

 ತನ್ನ ಪತಿ ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಪತ್ನಿಯೂ ಸಹ ಹೃದಯಾಘಾತದಿಂದ ಮೃತಪಟ್ಟಿರುವ ಮನಕಲಕುವ ಘಟನೆ ಬಾಗಲಕೋಟೆ ಜಿಲ್ಲೆ ಬನಹಟ್ಟಿಯಲ್ಲಿ ನಡೆದಿದೆ.

ಬನಹಟ್ಟಿ ನಿವಾಸಿ, 80 ವರ್ಷದ ಭೀಮಪ್ಪ ಬಾಗಲಕೋಟ ಎಂಬವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ಬೆಳಗಿನ ಜಾವ ಒಂದು ಗಂಟೆಗೆ ನಿಧನರಾಗಿದ್ದರು.

ಅವರ ನಿಧನದ ಸುದ್ದಿ ತಿಳಿದ ಪತ್ನಿ 74 ವರ್ಷದ ಕಸ್ತೂರಿ ಅವರಿಗೆ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಾವಿನಲ್ಲೂ ಒಂದಾದ ದಂಪತಿಯ ಅಂತ್ಯಕ್ರಿಯೆಯನ್ನು ಒಟ್ಟಿಗೆ ನೆರವೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...