ತುಮಕೂರು: ಗೌರಿ ಹಬ್ಬಕ್ಕೆ ತವರಿಗೆ ತೆರಳಿದ್ದ ಹೆಂಡತಿಯ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧುಗಿರಿ 4ನೇ ಅಧಿಕ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2014 ರ ಸೆ.2 ರಂದು ನಡೆದ ಘಟನೆ ಇದಾಗಿದ್ದು, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮದ್ದನಹಳ್ಳಿ ಗ್ರಾಮಕ್ಕೆ ಗೌರಿ ಪೂಜೆಗೆಂದು ಬಂದ ಪತ್ನಿಯ ಮೇಲೆ ಅನುಮಾನಗೊಂಡ ಪತಿ ಹರೀಶ್, ಪತ್ನಿಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿದ್ದ.
ಪತಿ ನಿಕ್ ರನ್ನು ರೋಸ್ಟ್ ಮಾಡಿದ ಪ್ರಿಯಾಂಕಾ ಚೋಪ್ರಾ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಮಂತಾ
ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಚಂದ್ರಶೇಖರ್ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಮಧುಗಿರಿ 4ನೇ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ್, ಅಪರಾಧಿ ಹರೀಶ್ ಗೆ ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.